HomeKarnatakaBIG NEWS: ಕಾಂಗ್ರೆಸ್ ಸೇರಲಿದ್ದಾರಾ ಸಿ.ಪಿ.ಯೋಗೇಶ್ವರ್? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

BIG NEWS: ಕಾಂಗ್ರೆಸ್ ಸೇರಲಿದ್ದಾರಾ ಸಿ.ಪಿ.ಯೋಗೇಶ್ವರ್? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು: ಚನ್ನಪಟ್ಟಣ ಉಪಚುನಾವಣೆ ಬೆನ್ನಲ್ಲೇ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಲು ಸಜ್ಜಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿ.ಪಿ.ಯೋಗೀಶ್ವರ್ ಆಗಲಿ ಯಾರೇ ಆಗಲಿ ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದರು.

ಇನ್ನು ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular