HomeKarnatakaBIG NEWS: ನನ್ನ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಳಂಕವಿಲ್ಲ ಎಂದ ಸಿಎಂ ಸಿದ್ದರಾಮಯ್ಯಗೆ MLC...

BIG NEWS: ನನ್ನ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಳಂಕವಿಲ್ಲ ಎಂದ ಸಿಎಂ ಸಿದ್ದರಾಮಯ್ಯಗೆ MLC ಸಿ.ಟಿ.ರವಿ ಟಾಂಗ್

ಬೆಂಗಳೂರು: ನನ್ನ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಳಂಕವಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ, ಅರ್ಕಾವತಿ ಹಗರಣ, ಮುಡಾ ಹಗರಣ ಇದೆಲ್ಲ ನಿಮಗೆ ಕಳಂಕ ಅಂತಾ ಅನಿಸಲಿಲ್ಲವೇ? ಎಂದು ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ,ರವಿ, ಸದನದಲ್ಲಿ ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಾರದೇ ಪಲಾಯನ ಮಾಡಿದಿರಿ. ಹೊರಗೆ ಬಂದು ನಿಮ್ಮನ್ನು ನೀವು ಸಮರ್ಥಿಸಿಕೊಳ್ಳುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟರೆ ತನಿಖೆ ಎದುರಿಸಲು ನಿಮಗೆ ಭಯ. ರಾಜ್ಯಪಾಲರ ವಿರುದ್ಧವೇ ಚಳುವಳಿ ಎಬ್ಬಿಸುವ ಮಾತನಾಡುತ್ತಿದ್ದೀರಿ. ವಿಶೇಷ ಅಧಿವೇಶನ ಕರೆಯಿರಿ, ಚರ್ಚೆ ಮಾಡೋಣ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular