HomeKarnatakaBIG NEWS: ರಾಜ್ಯ ಸಚಿವ ಸಂಪುಟ ಪುನಾರಚನೆ: ಕೆಲ ಸಚಿವರಿಗೆ ಕೊಕ್?

BIG NEWS: ರಾಜ್ಯ ಸಚಿವ ಸಂಪುಟ ಪುನಾರಚನೆ: ಕೆಲ ಸಚಿವರಿಗೆ ಕೊಕ್?

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಬಳಿ ಚರ್ಚಿಸಲು ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಸಂಪುಟ ಪುನಾರಚನೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸಚಿವ ಸಂಪುಟ ಪುನಾರಚನೆ ನಿಟ್ಟಿನಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಮಾಲೋಚನೆ ನಡೆಸಿದ್ದು, ಐದಾರು ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೆಲ ಸಚಿವರನ್ನು ಸಂಪುಟದಿಂದ ಕೈ ಬಿಟ್ಟು ಹೊಸಬರಿಗೆ ಮಣೆ ಹಾಕುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಚರ್ಚಿಸಲು ಮತ್ತೊಮ್ಮೆ ದೆಹಲಿಗೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ. ಎರಡು ತಿಂಗಳ ಬಳಿಕ ಸಚಿವ ಸಂಪುಟ ಪುನಾರ್ಚನೆ ಸಾಧ್ಯತೆ ಇದೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ನಿರ್ಧರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮುಡಾ ಅಕ್ರಮ ಆರೋಪ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದ್ದು, ಕೋರ್ಟ್ ತೀರ್ಮಾನ ನೋಡಿಕೊಂಡು ಮತ್ತೆ ದೆಹಲಿಗೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ವರಿಷ್ಠರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular