ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಕರಣ: ಬೆಂಗಳೂರಿಗೆ ಆಗಮಿಸಿದ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್, ಅಭಿಷೇಕ್ ಮನುಸಿಂಘ್ವಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತನಿಖೆಗೆ ಅನುಮತಿ ನೀಡಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇನ್ನೊಂದೆಡೆ ಸುಪ್ರೀಂ ಕೋರ್ಟ್ ಮೊರೆ ಹೋಗುವ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದು, ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರ ಜೊತೆ ಚರ್ಚೆ ನಡೆಸಲಿದ್ದಾರೆ.

ರಾಜ್ಯಪಾಲರ ವಿರುದ್ಧ ಹೋರಾಟ ನಿಟ್ಟಿನಲ್ಲಿ ಮುಂದೆ ಕೈಗೊಳ್ಳಬೇಕಾದ ನಡೆ ಬಗ್ಗೆ ಕಾನೂನು ಸಲಹೆ ಪಡೆಯುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಿರಿಯ ವಕೀಲ ಕಪಿಲ್ ಸಿಬಲ್, ಅಭಿಷೇಕ್ ಮನುಸಿಂಘಿ ಮಾಹಿತಿ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಕೀಲರಾಗಿರುವ ಕಪಿಲ್ ಸಿಬಲ್, ಅಭಿಷೇಕ್ ಮನುಸಿಂಘ್ವಿ, ಪ್ರಶಾಂತ್ ಭೂಷಣ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮೂವರು ಹಿರಿಯ ವಕೀಲರು ವಾಸ್ತವ್ಯ ಹೂಡಿದ್ದು, ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಮೂವರು ವಕೀಲರನ್ನು ಭೇಟಿಯಾಗಿ ಕಾನೂನು ಸಲಹೆ ಪಡೆಯಲಿದ್ದಾರೆ. ಅಲ್ಲದೇ ಮುಂದಿನ ಕಾನೂನು ಹೋರಾಟದ ಬಗ್ಗೆಯೂ ಕೂಲಂಕುಷವಾಗಿ ಚರ್ಚೆ ನಡೆಸಲಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read