HomeKarnatakaಸಿದ್ಧರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆಯೇ ಭಿನ್ನಮತ ಸ್ಪೋಟ

ಸಿದ್ಧರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆಯೇ ಭಿನ್ನಮತ ಸ್ಪೋಟ

ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ಭಿನ್ನಮತ ಸ್ಫೋಟಗೊಂಡಿದ್ದು, ರಾಮದುರ್ಗ ಕ್ಷೇತ್ರದಿಂದ ಚಿಕ್ಕರೇವಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಪ್ರತಿಭಟನೆ ನಡೆಸಲಾಗಿದೆ.

ಸಿದ್ಧರಾಮಯ್ಯ ಅವರು ತಂಗಿದ್ದ ಹೋಟೆಲ್ ಎದುರು ಅರ್ಧ ಗಂಟೆ ಚಿಕ್ಕರೇವಣ್ಣ ಬೆಂಬಲಿಗರು ಹೈಡ್ರಾಮಾ ನಡೆಸಿದ್ದಾರೆ. ಬೆಳಗ್ಗೆ ಭೇಟಿಯಾಗುತ್ತೇನೆ ಎಂದು ಸಿದ್ದರಾಮಯ್ಯ ಅವರನ್ನು ವಾಪಸ್ ಕಳುಹಿಸಿದ್ದಾರೆ. ಬಂದ ದಾರಿಗೆ ಸುಂಕವಿಲ್ಲ ಎನ್ನುವಂತೆ ಚಿಕ್ಕರೇವಣ್ಣ ಬೆಂಬಲಿಗರು ವಾಪಸ್ ತೆರಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ದಿನದ ಹಿಂದೆ ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಚಿಕ್ಕರೇವಣ್ಣ ಅವರ ಮನವೊಲಿಸಿ ಅಶೋಕ ಪಟ್ಟಣ ಸ್ಪರ್ಧಿಸುತ್ತಾರೆ ಎಂದು ಘೋಷಣೆ ಮಾಡಲಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾತಿಗೆ ಚಿಕ್ಕರೇವಣ್ಣ ಕೂಡ ಒಪ್ಪಿಗೆ ನೀಡಿದ್ದರು. ಇದೀಗ ಅವರು ಉಲ್ಟಾ ಹೊಡೆದು ಬೆಂಬಲಿಗರನ್ನು ಕಳುಹಿಸಿ ಹೈಡ್ರಾಮಾ ನಡೆಸಿದ್ದಾರೆ. ತಮ್ಮ ಬೆಂಬಲಿಗರ ಮೂಲಕ ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರುವ ತಂತ್ರ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular