BREAKING: ವೈಟ್ ಟಾಪಿಂಗ್ ಅಸಮರ್ಪಕ ನಿರ್ವಹಣೆ: ಎಂಜಿನಿಯರ್ ಗಳ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಬೆಂಗಳೂರು ನಗರ ಪ್ರದಕ್ಷಿಣೆ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಸ್ತೆಗುಂಡಿ ಮುಚ್ಚುವ ಕಾಮಗಾರಿಯನ್ನು ಖುದ್ದು ಪರಿಶೀಲನೆ ನಡೆಸಿದರು.

ನಗರ ಪ್ರದಕ್ಷಿಣೆ ವೇಳೆ ಅಲ್ಲಲ್ಲಿ ಕಟ್ಟಡಗಳ ಅವಶೇಷಗಳನ್ನು ಹಾಗೇ ಬಿಟ್ಟಿರುವ ಬಗ್ಗೆ, ರಸ್ತೆ ಬದಿ ಕಸ ತೆರವು ಮಾಡದಿರುವುದು, ವೈಟ್ ಟಾಪಿಂಗ್ ಕಾಮಗಾರಿ ಅಸಮರ್ಪಕ ನಿರ್ವಹಣೆ ಕಂಡು ಅಧಿಕಾರಿಗಳ ಬಿರುದ್ಧ ಸಿಎಂ ಗರಂ ಆದರು.

ಹೆಣ್ಣೂರಿನ ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ನಿರ್ವಹಣೆ ಆಗದಿರುವುದಕ್ಕೆ ಸಿಎಂ ಪ್ರಶ್ನಿಸಿದ್ದಾರೆ. ವೈಟ್ ಟಾಪಿಂಗ್ ಮಾಡಲು ಆರಿಸಿಕೊಂಡ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ. ಒಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಆ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಹಣ ಕೊಡಲು ಬರುವುದಿಲ್ಲ. ವೈಟ್ ಟಾಪಿಂಗ್ ಮುಗಿಯುವಾಗ 2-3 ವರ್ಷ ಆಗುತ್ತದೆ. ಅಲ್ಲಿಯವರೆಗೂ ಗುತ್ತಿಗೆದಾರರೇ ರಸ್ತೆಗಳ ನಿರ್ವಹಣೆ ಮಾಡಬೇಕು. ಆದರೆ ಹೇಳೋರು ಕೇಳೋರು ಇಲ್ಲದಂತೆ ಗುತ್ತಿಗೆದಾರರು ವರ್ತಿಸುತ್ತಿದ್ದಾರೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದರು‌. ಈ ಹಿನ್ನೆಲೆಯಲ್ಲಿ ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು ಮತ್ತು ಎಂಜಿನಿಯರ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು‌.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read