ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್ ಆರಂಭಿಸಿದ್ದು, ರಸ್ತೆಗುಂಡಿಗಳನ್ನು ಮುಚ್ಚುತ್ತಿರುವ ಅಧಿಕಾರಿಗಳ ಕಾರ್ಯವೈಖರಿಯನ್ನು ಖುದ್ದು ಪರಿಶೀಲನೆ ನಡೆಸಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಸಿಎಂ ಅಧಿಕೃತ ನಿವಾಸ ಕಾವೇರಿಯಿಂದ ಬೆಂಗಳ್ರು ನಗರ ಪ್ರದಕ್ಷಿಣೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಮೊದಲಿಗೆ ವಿಡ್ಸನ್ ಮ್ಯಾನರ್ ರಸ್ತೆಗೆ ಭೇಟಿ ನೀಡಿ ರಸ್ತೆ ದುರಸ್ತಿ ಕಾರ್ಯಗಳನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ವಿಬ್ ಗಯಾರ್ ರಸ್ತೆಗೆ ಭೇಟಿ ನೀಡಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲನೆ ನಡೆಸಿದರು. ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ತೆರಳಿ ಸಿಎಂ ಪರಿಶೀಲನೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರಾದ ಕೆ.ಜೆ.ಜಾರ್ಜ್, ಸಿಎಸ್ ಶಾಲಿನಿ ರಜನೀಶ್, ಜಿಬಿಎ ಆಯುಕ್ತ ಮಹೇಶ್ವರ ರಾವ್, ತುಷಾರ್ ಗಿರಿನಾಥ್, ಮತ್ತಿತರ ಅಧಿಕಾರಿಗಳು ಸಾಥ್ ನೀಡಿದರು.