HomeKarnatakaBREAKING : ಯಾವುದೇ ಡೌಟ್ ಬೇಡ, ನಾನೇ 'ಸಿಎಂ' ಆಗಿ ಮುಂದುವರೆಯುತ್ತೇನೆ : CM ಸಿದ್ದರಾಮಯ್ಯ...

BREAKING : ಯಾವುದೇ ಡೌಟ್ ಬೇಡ, ನಾನೇ ‘ಸಿಎಂ’ ಆಗಿ ಮುಂದುವರೆಯುತ್ತೇನೆ : CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಹುದ್ದೆ ಖಾಲಿ ಇಲ್ಲ, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೂ ಕೂಡ ಸಿಎಂ ಬದಲಾವಣೆಯಾಗಲಿದ್ದಾರೆ ಎಂದು ಹೇಳಿಲ್ಲ. ಸಚಿವರು ಕೂಡ ಸಿಎಂ ಬದಲಾವಣೆ ಎಂದು ಹೇಳಿಕೆ ಕೊಟ್ಟಿಲ್ಲ. ಸಿಎಂ ಕುರ್ಚಿ ಖಾಲಿ ಇಲ್ಲ. ಖಾಲಿ ಇದ್ರೆ ಬೇರೆಯವರು ಬರೋದು. ಸಿದ್ದರಾಮಯ್ಯನವರೇ ಮುಂದುವರೆಯಲಿ ಅಂತಾ ಪತ್ರ ಬರೆದಿದ್ದಾರೆ ಅಷ್ಟೇ ಎಂದು ಹೇಳಿದರು.

ಯಾರಿಗೂ ಸಿಎಂ ಬದಲಾವಣೆ ಆಗುತ್ತೆ ಎಂಬ ಅನುಮಾನ ಇಲ್ಲ. ಸಚಿವರು ಕೂಡ ಸಿಎಂ ಬದಲಾವಣೆ ಅಂತಾ ಎಲ್ಲಿಯೂ ಹೇಳಿಲ್ಲ. ಯಾವುದೇ ಡೌಟ್ ಇಲ್ಲ, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular