HomeKarnatakaBIG NEWS: ವಿವಾದದ ಬೆನ್ನಲ್ಲೇ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

BIG NEWS: ವಿವಾದದ ಬೆನ್ನಲ್ಲೇ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ರಾಜಕೀಯ ತಿರುವು ಪಡೆದುಕೊಂಡಿದೆ ಮಾತ್ರವಲ್ಲದೇ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ಇನ್ನೂ ವಾಪಾಸ್ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾರೋ ಒಬ್ಬರು ಪ್ರಶ್ನೆ ಮಾಡಿದ್ದಕ್ಕೆ ಆ ಉತ್ತರ ಕೊಟ್ಟಿದ್ದೇನೆ. ಹಿಜಾಬ್ ನಿಷೇಧ ಆದೇಶ ವಾಪಾಸ್ ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular