HomeLatest NewsBREAKING : ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ : 'CM ಸಿದ್ದರಾಮಯ್ಯ' ವಿರುದ್ಧ...

BREAKING : ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ : ‘CM ಸಿದ್ದರಾಮಯ್ಯ’ ವಿರುದ್ಧ ದೂರು ದಾಖಲು !

ಬೆಳಗಾವಿ: ಪೊಲೀಸ್ ಅಧಿಕಾರಿಯ ಮೇಲೆ ಹೊಡೆಯಲು ಕೈ ಎತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ CM ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ಸಮಾವೇಶದ ವೇಳೆ ಬಿಜೆಪಿ ಕಾರ್ಯಕರ್ತರು ವೇದಿಕೆಯತ್ತ ನುಗ್ಗಲು ಯತ್ನಿಸಿ ಪ್ರತಿಭಟನೆ ನಡೆಸುತ್ತಿರುವುದನ್ನು ಕಂಡು ಗರಂ ಆದ ಸಿಎಂ ಸಿದ್ದರಾಮಯ್ಯ, ಭದ್ರತೆಗೆ ನಿಯೋಜಿಸಿದ್ದ ಧಾರವಾಡದ ಎ ಎಸ್ ಪಿ ನಾರಾಯಣ ಭರಮನಿ ಅವರಿಗೆ ಹೊಡೆಯಲೆಂಬಂತೆ ಕೈ ಎತ್ತಿದ್ದ ಘಟನೆ ನಡೆದಿತ್ತು. ಪೊಲೀಸ್ ಅಧಿಕಾರಿ ಮೇಲೆ ಕೈ ಮಾಡಲು ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದೇ ವೇಳೆ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೂ ದೂರು ಸಲ್ಲಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ನಾಡಿನ ಸಮಸ್ತ ಜನರ ಚಿಂತನೆ-ಮಂಥನೆಗೆ ಧ್ವನಿಯಾಗಬೇಕಾದವರು, ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ್ದಲ್ಲದೇ ಬೈದಿದ್ದಾರೆ. ಇದು ಪೊಲೀಸ್ ಅಧಿಕಾರಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಿದ್ದಾರೆ. ಸಿಎಂ ಅವರ ಈ ನಡೆ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular