HomeLatest Newsಮುಖ್ಯಮಂತ್ರಿಯಾಗಿ 7 ವರ್ಷ ಪೂರ್ಣಗೊಳಿಸಿದ ಸಿದ್ದರಾಮಯ್ಯ ಹಲವು ದಾಖಲೆ

ಮುಖ್ಯಮಂತ್ರಿಯಾಗಿ 7 ವರ್ಷ ಪೂರ್ಣಗೊಳಿಸಿದ ಸಿದ್ದರಾಮಯ್ಯ ಹಲವು ದಾಖಲೆ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 7 ವರ್ಷ ಪೂರ್ಣಗೊಳಿಸಿದ್ದಾರೆ. ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಇಂದಿಗೆ(ಮೇ 20) ಎರಡು ವರ್ಷ ಪೂರೈಸಲಿದ್ದು, ಮೂರನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ ದಾಖಲೆಯತ್ತ ಹೆಜ್ಜೆ ಹಾಕಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರಿನಿಂದ ದೇವರಾಜ ಅರಸು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದರು. ಮೊದಲ ಬಾರಿಗೆ ಪೂರ್ಣಾವಧಿ ಆಡಳಿತ ನಡೆಸಿದ ಅರಸು ಎರಡನೇ ಅವಧಿಯಲ್ಲಿ ಮೂರು ವರ್ಷ ಮುಖ್ಯಮಂತ್ರಿ ಆಗಿದ್ದರು. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ 2013 ರಿಂದ 2018ರವರೆಗೆ 5 ವರ್ಷ ಪೂರ್ಣಾವಧಿ ಆಡಳಿತ ನಡೆಸಿದ್ದು, ಅರಸು ನಂತರ ಪೂರ್ಣಾವಧಿ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2023ರಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಎರಡು ವರ್ಷ ಪೂರ್ಣಗೊಳಿಸಿದ್ದಾರೆ. ಎಂಟು ವರ್ಷ ಮುಖ್ಯಮಂತ್ರಿ ಆಗಿದ್ದ ದೇವರಾಜ ಅರಸು ದಾಖಲೆಗೆ 7 ವರ್ಷ ಸಿಎಂ ಆಗಿ ಆಡಳಿತ ನಡೆಸಿದ ಸಿದ್ದರಾಮಯ್ಯ ಹತ್ತಿರವಾಗಿದ್ದಾರೆ.

ಹಣಕಾಸು ಸಚಿವರಾಗಿ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಅತಿ ಹೆಚ್ಚು 16 ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ 13 ಬಾರಿ ಬಜೆಟ್ ಮಂಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವಿಭಜಿತ ಮೈಸೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಬಾರಿ ವಿಧಾನಸಭೆಗೆ ಆಯ್ಕೆಯಾದ ನಾಯಕ ಸಿದ್ದರಾಮಯ್ಯ ಅವರು 9 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ 5 ಬಾರಿ, ವರುಣಾದಿಂದ 3 ಬಾರಿ, ಬಾದಾಮಿಯಿಂದ ಒಂದು ಬಾರಿ ಗೆದ್ದು ವಿಧಾನಸಭೆ ಶಾಸಕರಾಗಿದ್ದಾರೆ.

2004ರಿಂದಲೂ ಒಂದಲ್ಲ ಒಂದು ಅಧಿಕಾರ ಸಿದ್ದರಾಮಯ್ಯನವರಿಗೆ ಸಿಕ್ಕಿದೆ. 2004ರಲ್ಲಿ ಎರಡನೇ ಬಾರಿಗೆ ಉಪಮುಖ್ಯಮಂತ್ರಿಯಾಗಿದ್ದ ಅವರು 2008ರಲ್ಲಿ ವರುಣಾ ಕ್ಷೇತ್ರದಿಂದ ಗೆದ್ದಾಗ ಒಂದು ವರ್ಷದ ನಂತರ ವಿಪಕ್ಷ ನಾಯಕರಾಗಿದ್ದರು. 2013ರಲ್ಲಿ ಎರಡನೇ ಬಾರಿ ಗೆದ್ದಾಗ ಮುಖ್ಯಮಂತ್ರಿಯಾದರು. 2018ರಲ್ಲಿ ಬಾದಾಮಿಯಿಂದ ಜಯಗಳಿಸಿದಾಗ 14 ತಿಂಗಳ ಕಾಲ ಪ್ರತಿಪಕ್ಷ ನಾಯಕರಾಗಿದ್ದರು. 2023ರಲ್ಲಿ ವರುಣಾದಿಂದ ಮೂರನೇ ಬಾರಿಗೆ ಗೆದ್ದಾಗ ಎರಡನೇ ಸಲ ಮುಖ್ಯಮಂತ್ರಿ ಆಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular