‘ಎಜುಕೇಟ್ ಗರ್ಲ್ಸ್’ ಸಂಸ್ಥೆಗೆ ‘ಮ್ಯಾಗ್ಸೆಸೆ ಪ್ರಶಸ್ತಿ’: ಸಿದ್ದರಾಮಯ್ಯ ಅಭಿನಂದನೆ

ಶಾಲೆಯಿಂದ ಹೊರಗುಳಿದಿರುವ ಹಳ್ಳಿಗಾಡಿನ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಭಾರತದ ‘ಎಜುಕೇಟ್ ಗರ್ಲ್ಸ್'(‘Educate Girls’) ಸಂಸ್ಥೆಯು 2025ನೇ ಸಾಲಿನ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನವಾದ ಸುದ್ದಿ ಕೇಳಿ ಖುಷಿಯಾಯಿತು. ಸಂಸ್ಥೆಯ ಸ್ಥಾಪಕಿ ಸಫೀನಾ ಹುಸೇನ್‌ರಿಗೆ ಅಭಿನಂದನೆಗಳು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ರಾಜಸ್ಥಾನದ ಕುಗ್ರಾಮವೊಂದರಲ್ಲಿ ಬಾಲಕಿಯೊಬ್ಬಳ‌ ಶಿಕ್ಷಣಕ್ಕಾಗಿ ಆರಂಭಗೊಂಡಿದ್ದ “Educate Girls” ಸಂಸ್ಥೆಯು, ಕಾಲ ಕಳೆದಂತೆ ಹೆಮ್ಮರವಾಗಿ ಬೆಳೆದು ಇಂದು ಸಾವಿರಾರು ಶಿಕ್ಷಣ ವಂಚಿತ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿಸಲು ನಿಸ್ವಾರ್ಥ ಶ್ರಮಿಸುತ್ತಿದೆ.  ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ  ‘Educate Girls’ ಸಂಸ್ಥೆಯ ಹಿಂದಿರುವ ನಿಸ್ವಾರ್ಥ ಜೀವಗಳಿಗೆ ಈ ಪ್ರಶಸ್ತಿ ಹೊಸ ಸ್ಪೂರ್ತಿ ತುಂಬಲಿದೆ ಎಂದು ಭಾವಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read