HomeKarnatakaಈ ಅಮೋಘ ಸಾಧನೆ ಶಾಶ್ವತವಾಗಿ ಉಳಿಯಲಿದೆ: ಚೊಚ್ಚಲ ಖೋಖೋ ವಿಶ್ವಕಪ್ ಗೆದ್ದ ಭಾರತ ಪುರುಷರ, ಮಹಿಳಾ...

ಈ ಅಮೋಘ ಸಾಧನೆ ಶಾಶ್ವತವಾಗಿ ಉಳಿಯಲಿದೆ: ಚೊಚ್ಚಲ ಖೋಖೋ ವಿಶ್ವಕಪ್ ಗೆದ್ದ ಭಾರತ ಪುರುಷರ, ಮಹಿಳಾ ತಂಡಕ್ಕೆ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ದೆಹಲಿಯಲ್ಲಿ ನಡೆದ ಮೊದಲ ಆವೃತ್ತಿಯ ಖೋಖೋ ವಿಶ್ವಕಪ್ ಪಂದ್ಯದಲ್ಲಿ ಭಾರತದ ಪುರುಷರ ಮತ್ತು ಮಹಿಳಾ ತಂಡಗಳು ಜಯಗಳಿಸಿ ಚಾಂಪಿಯನ್ ಆಗಿವೆ.

ಪುರುಷರ ತಂಡ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿದೆ. ಭಾರತ 54, ನೇಪಾಳ ತಂಡಕ್ಕೆ 36 ಅಂಕ ಬಂದಿವೆ. ಮಹಿಳಾ ತಂಡ ಕೂಡ ಖೋಖೋ ಚಾಂಪಿಯನ್ ಆಗಿದೆ. ದೆಹಲಿಯಲ್ಲಿ ನಡೆದ ಮೊದಲ ಆವೃತ್ತಿಯ ಖೋಖೋ ವಿಶ್ವಕಪ್ ನಲ್ಲಿ ಒಂದು ಪಂದ್ಯವನ್ನು ಸೋಲದೆ ಫೈನಲ್ ಪ್ರವೇಶಿಸಿದ ಭಾರತ ಮಹಿಳಾ ತಂಡ ಫೈನಲ್ ಪಂದ್ಯದಲ್ಲಿ ನೇಪಾಳವನ್ನು 78 -40 ಅಂಕಗಳ ಅಂತರದಿಂದ ಸೋಲಿಸಿ ಚಾಂಪಿಯನ್ ಆಗಿದೆ.

ಮೊಟ್ಟ ಮೊದಲ ಖೋಖೋ ವಿಶ್ವಕಪ್ ಗೆದ್ದು, ಚಾಂಪಿಯನ್ ಆದ ಭಾರತದ ಪುರುಷರ ಮತ್ತು ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಅಭಿನಂದನೆಗಳು.

ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ.

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕುರುಬೂರಿನ ಯುವತಿ ಚೈತ್ರ. ಬಿ ಅವರು ವಿಶ್ವವಿಜೇತ ಮಹಿಳಾ ಖೊ-ಖೊ ತಂಡದ ಭಾಗವಾಗಿರುವುದು ನಾಡಿಗೆ ಹೆಮ್ಮೆಯ ಸಂಗತಿ.

ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನ” ಎಂದು ಸಿಎಂ ಸಿಸದ್ಧರಾಮಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular