ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿರುವ ಗುತ್ತಿಗೆದಾರರು ಬಾಕಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ್ದಾರೆ. ಸರ್ಕಾರದ ವಿರುದ್ಧ ಆರೋಪ ಮಾಡಿರುವ ಗುತ್ತಿಗೆದಾರರ ವಿರುದ್ಧ ಗರಂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗುತ್ತಿಗೆದಾರರು ಕೋರ್ಟ್ ಗೆ ಹೋಗಲಿ ಎಂದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಮಿಷನ್ ಆರೋಪದ ಬಗ್ಗೆ ಗುತ್ತಿಗೆದಾರರು ಕೋರ್ಟ್ ಗೆ ಹೋಗಲಿ ಎಂದರು. ಗುತ್ತಿಗೆದಾರರಿಂದ ಈ ರೀತಿ ಮಾಡಿಸುತ್ತಿದ್ದಾರೆ. ಅವರು ಕೋರ್ಟ್ ಗೆ ಹೋಗಲಿ ಎಂದು ಹೇಳಿದರು.
ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್, ನಾವು ಕೋರ್ಟ್ ಗೆ ಹೋಗಲ್ಲ. ಮುಷ್ಕರ ನಡೆಸುತ್ತೇವೆ. ಒಂದು ತಿಂಗಳಲ್ಲಿ ಬಾಕಿ ಹಣ ಬಿಡುಗಡೆ ಮಾಡಿ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.