HomeLatest NewsBIG NEWS: 'ಹೈಕಮಾಂಡ್ ಒಪ್ಪಿದರೆ ನಾನೇ 5 ವರ್ಷ ಮುಖ್ಯಮಂತ್ರಿ' ಎಂದ ಸಿದ್ದರಾಮಯ್ಯ: 'ಸಿಎಂ ಹೇಳಿದ...

BIG NEWS: ‘ಹೈಕಮಾಂಡ್ ಒಪ್ಪಿದರೆ ನಾನೇ 5 ವರ್ಷ ಮುಖ್ಯಮಂತ್ರಿ’ ಎಂದ ಸಿದ್ದರಾಮಯ್ಯ: ‘ಸಿಎಂ ಹೇಳಿದ ಮೇಲೆ ಇನ್ನೇನಿದೆ’? ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಈ ಮೂಲಕ ಹೈಕಮಾಂಡ್ ಒಪ್ಪಿದರೆ ನಾನೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬೆಳವಣಿಗೆ ನಡುವೆಯೇ ದೆಹಲಿಗೆ ತೆರಳಿ ವಾಪಸ್ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಅವರು ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹೈಕಮಾಂಡ್ ಒಪ್ಪಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಸಿಎಂ ಅವರು ಹೇಳಿದ ಮೇಲೆ ಆಯಿತು. ಇನ್ನೇನಿದೆ? ಎಂದರು.

ದೆಹಲಿ ಭೇಟಿ ವಿಚಾರವಾಗಿ, ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಹೀಗಾಗಿ ಸಂತಾಪ ಸೂಚಿಸಲು ಅವರ ಮನೆಗೆ ಭೇಟಿ ನೀಡಿದ್ದೆ. ನಾನು ತಿಹಾರ್ ಜೈಲಿನಲ್ಲಿದ್ದಾಗ ಅವರು ಸೋನಿಯಾ ಗಾಂಧಿ ಅವರ ಜೊತೆ ಬಂದು ನನ್ನನ್ನು ಭೇಟಿ ಮಾಡಿದ್ದರು. ನನಗೂ ಅವರಿಗೂ ಬಹಳ ಆತ್ಮೀಯತೆ. ನಮ್ಮ ಪಕ್ಷದ ನಾಯಕರು ಅವರು. ಎಸ್.ಎಂ.ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ನಮಗೆ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನನ್ನನ್ನು ತಮ್ಮನಂತೆ ಕಂಡಿದ್ದರು, ನನ್ನ ಕೆಲಸಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಹಾಗಾಗಿ ನಾನು ಅವರ ಮನೆಗೆ ಭೇಟಿ ನೀಡಿದ್ದೆ ಎಂದು ತಿಳಿಸಿದರು.

ನಾನು ದೆಹಲಿಗೆ ಹೋಗಿದ್ದ ವಿಷಯ, ಕೆಲಸದ ಬಗ್ಗೆ ಮಾತ್ರ ಹೇಳಬಲ್ಲೆ. ಹೈಕಮಾಂಡ್ ಭೇಟಿ ಬಗ್ಗೆ ಮಾಧ್ಯಮದವರು, ಸಾರ್ವಜನಿಕರು, ಇನ್ನೂ ಬೇರೆಯವರು ಏನು ಬೇಕಾದರೂ ಚರ್ಚೆ ಮಾಡಿಕೊಳ್ಳಲಿ. ಯಾರು ಬೇಕಾದರೂ ಮಾತಾಡಿಕೊಳ್ಳಲಿ. ನನಗದು ಸಂಬಂಧ ಪಡದ ವಿಷಯ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular