HomeLatest NewsBREAKING: ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ

BREAKING: ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ತೀರ್ಮಾನ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತದೆಯೋ ಅದೇ ಅಂತಿಮ. ಹೈಕಮಾಂಡ್ ತೀರ್ಮಾನಕ್ಕೆ ನಾನಾಗಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ಆಗಲಿ ಬದ್ಧರಾಗಿರುತ್ತೇವೆ ಎಂದರು.

ಹೈಕಮಾಂಡ್ ನವರು ನನ್ನನ್ನು ಮುಂದುವರೆಯಲು ಹೇಳಿದರೆ ನಾನೇ ಮುಂದುವರೆಯುತ್ತೇನೆ. ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular