HomeLatest NewsBIG NEWS: ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ: ದೆಹಲಿ ಭೇಟಿ ವಿಚಾರವಾಗಿ ಡಿಸಿಎಂ...

BIG NEWS: ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ: ದೆಹಲಿ ಭೇಟಿ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು: ದೆಹಲಿ ಪ್ರವಾಸ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ವಪಕ್ಷಗಳ ಸಭೆ ಹೊರತಾಗಿ ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ನಾನು ಸಿಎಂ ಸಿದ್ದರಾಮಯ್ಯನವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಿ ಚರ್ಚಿಸುತ್ತೇನೆ. ಬಳಿಕ ನಿರ್ಧರಿಸುವುದಾಗಿ ತಿಳಿಸಿದರು.

ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ನಾನು ಯಾರ ಬೆನ್ನಿಗೂ ಚೂರಿ ಹಾಕುವವನೂ ಅಲ್ಲ. ನಾನು ಯಾದುದೇ ಶಾಸಕರನ್ನು ಕರೆದುಕೊಂಡು ದೆಹಲಿಗೆ ಹೋಗಿಲ್ಲ. ಹೋಗಬೇಕು ಎಂದರೆ ನೂರು ಶಾಸಕರನ್ನು ಒಟ್ಟಿಗೆ ಕರೆದುಕೊಂಡು ಹೋಗಬಹುದಿತ್ತು. ಅದೇನೂ ನನಗೆ ದೊಡ್ಡದಲ್ಲ. ಪಾರ್ಟಿ ಪ್ರೆಸಿಡೆಂಟ್ ಎಂದರೆ ಫಾದರ್ ಇದ್ದಂಗೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ನಮ್ಮಲ್ಲಿ ಯಾವುದೇ ಅಸಮಾಧಾನವಾಗಲಿ, ಗೊಂದಲಗಳಾಗಲಿ ಇಲ್ಲ. ರಾಜಕೀಯವಾಗಿ ನನ್ನದು ಹಾಗೂ ಸಿಎಂ ಸಿದ್ದರಾಮಯ್ಯನವರದ್ದು ಒಂದೇ ತೀರ್ಮಾನ. 2028ರಲ್ಲಿಯೂ ಕಾಂಗ್ರೆಸ್ ಸರ್ಕಾರ ತರುವುದೇ ನಮ್ಮ ಗುರಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular