HomeLatest NewsBREAKING: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿಕ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್:...

BREAKING: ಸಿಎಂ ಸಿದ್ದರಾಮಯ್ಯ ನಿವಾಸದ ಬಳಿಕ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್: ಸಿಎಂ-ಡಿಸಿಎಂ ಮತ್ತೊಂದು ಉಪಹಾರ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಪೈಪೋಟಿ ನಡುವೆಯೇ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು.

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ-ಡಿಸೆಂ ಒಗ್ಗಟ್ಟಿನ ಸಂದೇಶ ರವಾನಿಸಿ ಏನೇ ಇದ್ದರೂ ಹೈಕಮಾಂಡ್ ಹೇಳಿದಂತೆ ನಡೆಯುತ್ತೇವೆ ಎಂದು ಹೇಳುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದರು. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಿಎಂ ಸಿದರಾಮಯ್ಯ ಅವರನ್ನು ತಮ್ಮ ಮನೆಗೆ ಆಹ್ವಾನಿಸಿದ್ದು, ಉಪಹಾರ ಸಭೆ ನಡೆಸಲು ಮುಂದಾಗಿದ್ದಾನೆ.

ನಾಳೆ ಮಂಗಳವಾರ ಬೆಳಿಗ್ಗೆ 9:30ಕ್ಕೆ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೊಂದು ಸುತ್ತಿನ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ. ಇಬ್ಬರ ಉಪಹಾರ ಸಭೆ ತೀವ್ರ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular