ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಡಿಸಿಎಂ ಆಹ್ವಾನದ ಮೇರೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ಸಿಎಂ ಸಿದ್ದರಾಮಯ್ಯ ನಾಟಿಕೋಳಿ ಸಾರು, ಇಡ್ಲಿ ಸವಿದಿದ್ದಾರೆ. ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿ.ಕೆ.ಶಿವಕುಮಾರ್ ಬ್ರದರ್ಸ್. ನಾನು-ಡಿ.ಕೆ.ಶಿವಕುಮಾರ್ ಒಂದೇ ಪಕ್ಷ, ಒಂದೇ ಸಿದ್ಧಾಂತವನ್ನು ಹೊಂದಿದ್ದೇವೆ. ನಮ್ಮಲ್ಲಿ ಯಾವುದೇ ಅಸಮಾಧಾನ, ಭಿನ್ನಾಭಿಪ್ರಾಯವಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಅಧಿವೇಶನ, ರಾಜಕೀಯ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಹೈಕಮಾಂಡ್ ನಾಯಕರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಒಗ್ಗಟ್ಟಿನಿಂದ ಮುನ್ನಡೆಯುತ್ತೇವೆ ಎಂದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ಯಾವಾಗ ಸಿಎಂ ಆಗುತ್ತಾರೆ? ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದಾಗ ಎಂದಿದ್ದಾರೆ.
ಹೈಕಮಾಂಡ್ ಹೇಳಿದಾಗ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಹೇಳುವ ಮೂಲಕ ಕುರ್ಚಿ ಕದನ ವಿಚಾರವನ್ನು ಹೈಕಮಾಂಡ್ ನಾಯಕರ ನಿರ್ಧಾರಕ್ಕೆ ಬಿಟ್ಟಿದ್ದಾರೆ.
