HomeLatest NewsBREAKING: ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಕುತೂಹಲ...

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಕುತೂಹಲ ಮೂಡಿಸಿದ ಉಪಹಾರ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿಗಾಗಿ ಪೈಪೋಟಿ ತೀವ್ರಗೊಂಡಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ.

ಶನಿವಾರವಷ್ಟೇ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು. ಈಗ ಡಿಸಿಎಂ ಆಹ್ವಾನದ ಮೇರೆಗೆ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್, ಸಿಎಂ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಬರ ಮಾಡಿಕೊಂಡರು.

ಕೆಲವೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬ್ರೇಕ್ ಫಾಸ್ಟ್ ಮೀಟಿಂಗ್ ಆರಂಭವಾಗಲಿದ್ದು, ತೀವ್ರ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular