HomeLatest NewsBREAKING NEWS: ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್: ನಾಳೆ ದೆಹಲಿಗೆ ದೌಡು

BREAKING NEWS: ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್: ನಾಳೆ ದೆಹಲಿಗೆ ದೌಡು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ ನೀಡಿದೆ.

ಹೈಕಮಾಂಡ್ ಕರೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ದೆಹಲಿಗೆ ತೆರಳಲಿದ್ದಾರೆ. ಈಗಾಗಲೇ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದು, ನಾಳೆ ಸಿಎಂ ಸಿದ್ದರಾಮ್ಯಯ ಕೂಡ ದೆಹಲಿಗೆ ತೆರಳಲಿದ್ದಾರೆ.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಹೈಕಮಾಂಡ್ ನಾಯಕರು ವಿವರಣೆ ಕೇಳಿದ್ದಾರೆ ಎನ್ನಲಾಗಿದೆ. ನಾಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸಲಿದ್ದಾರೆ. ಕಾಲ್ತುಳಿತ ದುರಂತದ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular