HomeKarnatakaBIG NEWS: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಸಮನ್ಸ್ ಜಾರಿ

BIG NEWS: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಸಮನ್ಸ್ ಜಾರಿ

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಬಿಜೆಪಿ ವಿರುದ್ಧ 40% ಬ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು ನೀಡಿದ್ದಕ್ಕೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕ್ಲರಣ ವಿಚಾರಣೆ ನಡೆಸಿದ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಅವರಿಗೆ ಏಪ್ರಿಲ್ 29ಕ್ಕೆ ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೂನ್ 1ರಂದು ಕೋರ್ಟ್ ಗೆ ಹಾಜರಾಗಲು ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮನ್ಸ್ ಜಾರಿಗೆ ಹೈಗ್ರೌಂಡ್ಸ್ ಠಾಣೆ ಪೊಲೀಸರಿಗೆ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಮನ್ಸ್ ಜಾರಿಗೆ ಸದಾಶಿವನಗರ ಠಾಣೆ ಪೊಲೀಸರಿಗೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular