HomeLatest NewsBIG NEWS: ಬೆಂಗಳೂರಿನಲ್ಲಿ ಮಹಾಮಳೆ ಅವಾಂತರ: ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಸಿಎಂ-ಡಿಸಿಎಂ

BIG NEWS: ಬೆಂಗಳೂರಿನಲ್ಲಿ ಮಹಾಮಳೆ ಅವಾಂತರ: ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಸಿಎಂ-ಡಿಸಿಎಂ

ಬೆಂಗಳೂರು: ವರುಣಾರ್ಭಟಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆ ತತ್ತರಗೊಂಡಿದ್ದಾರೆ. ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಮಳೆ ಹಾನಿ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಸಂಜೆ ಭೇಟಿ ನೀಡಲಿದ್ದಾರೆ.

ಬೆಂಗಳೂರು ಗೃಹ ಕಚೇರಿ ಕೃಷ್ಣಾದಿಂದ ಸಂಜೆ 4:30ಕ್ಕೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾನ್ಯತಾ ಟೆಕ್ ಪಾರ್ಕ್, ಸಾಯಿಲೇಔಟ್, ಈಜೀಪುರ, ಹೆಚ್ ಎಸ್ ಆರ್ 5ನೇ ಮತ್ತು 6ನೇ ವಲಯ, ಸಿಲ್ಕ್ ಬೋರ್ಡ್ ಪ್ರದೇಶ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜನರ ಸಂಕಷ್ಟ ಆಲಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular