HomeKarnatakaBIG NEWS: ತಪ್ಪಿತಸ್ಥ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ; ದರ್ಶನ್ ಹಾಗೂ ಗ್ಯಾಂಗ್ ನ್ನು ಬೇರೆ ಬೇರೆ...

BIG NEWS: ತಪ್ಪಿತಸ್ಥ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ; ದರ್ಶನ್ ಹಾಗೂ ಗ್ಯಾಂಗ್ ನ್ನು ಬೇರೆ ಬೇರೆ ಕಾರಾಗೃಹಕ್ಕೆ ಸ್ಥಳಾಂತರಿಸಿ: ಸಿಎಂ ತಾಕೀತು

ಬೆಂಗಳೂರು: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಡಿಜಿ-ಐಜಿಪಿಯಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ನಿಯಮ ಉಲ್ಲಂಘನೆ ಮಾಡಿ ನಡೆದುಕೊಂಡ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ, ಶಿಸ್ತುಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಅಲ್ಲದೇ ನಟ ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ತಾಕೀತು ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಹಾಗೂ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ, ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸುವಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular