HomeKarnatakaಇಂದು ಸಿಎಂ, ಡಿಸಿಎಂ ಸೇರಿ 10 ಸಚಿವರ ಪ್ರಮಾಣ ವಚನ: ಯಾರಿಗೆಲ್ಲಾ ಸಚಿವ ಸ್ಥಾನ…? ಇಲ್ಲಿದೆ...

ಇಂದು ಸಿಎಂ, ಡಿಸಿಎಂ ಸೇರಿ 10 ಸಚಿವರ ಪ್ರಮಾಣ ವಚನ: ಯಾರಿಗೆಲ್ಲಾ ಸಚಿವ ಸ್ಥಾನ…? ಇಲ್ಲಿದೆ ಮಾಹಿತಿ

ಬೆಂಗಳೂರು: ಇಂದು ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 10 ಮಂದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಕೇವಲ 8 ಶಾಸಕರು ಮಾತ್ರ ಪ್ರಮಾಣವಚನ ಸ್ವೀಕರಿಸುವರು. ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರಾಗಿ ಎಂ.ಬಿ. ಪಾಟೀಲ್, ಡಾ.ಜಿ. ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಸತೀಶ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿಯಲ್ಲಿ ತಡರಾತ್ರಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರೊಂದಿಗೆ ಸುಮಾರು 5 ಗಂಟೆಗಳ ಚರ್ಚೆ ನಡೆಸಿ ತಡರಾತ್ರಿ ಸಿಎಂ, ಡಿಸಿಎಂ ಸೇರಿ 10 ಶಾಸಕರು ಪ್ರಮಾಣ ವಚನ ಸ್ವೀಕರಿಸಲು ತೀರ್ಮಾನಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular