HomeKarnataka2 ನೇ ಬಾರಿಗೆ ಮುಖ್ಯಮಂತ್ರಿಯಾಗ್ತಿರುವ ಸಿದ್ಧರಾಮಯ್ಯರಿಗೆ ಅಭಿನಂದನೆಗಳು, ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಗೆ ಶುಭಾಶಯಗಳು;...

2 ನೇ ಬಾರಿಗೆ ಮುಖ್ಯಮಂತ್ರಿಯಾಗ್ತಿರುವ ಸಿದ್ಧರಾಮಯ್ಯರಿಗೆ ಅಭಿನಂದನೆಗಳು, ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಗೆ ಶುಭಾಶಯಗಳು; ಬೆಂಬಲಿಗರಿಂದ ಪೋಸ್ಟರ್ ವಾರ್

 ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಮುಖ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಪೈಪೋಟಿ ತೀವ್ರಗೊಂಡಿದ್ದು, ಭಾನುವಾರ ಅವರ ಬೆಂಬಲಿಗರು ಆಯಾ ನಾಯಕರನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಅವರ ನಿವಾಸದ ಹೊರಗೆ “ಕರ್ನಾಟಕದ ಮುಂದಿನ ಸಿಎಂ” ಎಂದು ಉಲ್ಲೇಖಿಸುವ ಪೋಸ್ಟರ್ ಹಾಕಿದ್ದಾರೆ.

ಬೆಂಗಳೂರಿನಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಮನೆಯ ಹೊರಗೆ ಮೇ 15 ರಂದು “ಕರ್ನಾಟಕದ ನೂತನ ಮುಖ್ಯಮಂತ್ರಿಗೆ ಜನ್ಮದಿನದ ಶುಭಾಶಯಗಳು” ಎಂದು ಬರೆದಿರುವ ಪೋಸ್ಟರ್‌ಗಳನ್ನು ಹಾಕಲಾಗಿದೆ.

ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ(ಸಿಎಲ್‌ಪಿ) ಸಭೆ ನಡೆಯಲಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷವು ಕರ್ನಾಟಕಕ್ಕೆ ಮುಖ್ಯಮಂತ್ರಿಯನ್ನು ನಿರ್ಧರಿಸಲು ಪಕ್ಷದ ಹೈಕಮಾಂಡ್‌ಗೆ ಬಿಡುವ ನಿರ್ಣಯವನ್ನು ಅಂಗೀಕರಿಸುವ ನಿರೀಕ್ಷೆಯಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular