HomeLatest Newsದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಮಾಡಬಾರದ್ದನ್ನು ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪ ಪರಿಹಾರವಾಗಲ್ಲ:...

ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಮಾಡಬಾರದ್ದನ್ನು ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪ ಪರಿಹಾರವಾಗಲ್ಲ: ಸಿಎಂ ಸಿದ್ದರಾಮಯ್ಯ

ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು‌ ಹೇಳಿದರು.

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು.

ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ ಎಂದು ಇದೇವೇಳೆ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular