HomeKarnatakaBIG NEWS: ಮಾಜಿ ಸಚಿವ ಡಾ.ಕೆ.ಸುಧಾಕರ್ ಜೈಲಿಗೆ ಹೊಗುವುದು ಗ್ಯಾರಂಟಿ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

BIG NEWS: ಮಾಜಿ ಸಚಿವ ಡಾ.ಕೆ.ಸುಧಾಕರ್ ಜೈಲಿಗೆ ಹೊಗುವುದು ಗ್ಯಾರಂಟಿ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ರಾಜಕೀಯ ನಾಯಕರ ಅಬ್ಬರದ ಪ್ರಚಾರ ಜೋರಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಚುನಾವಣಾ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಚಿವ ಡಾ.ಸುಧಾಕರ್ ಜೈಲಿಗೆ ಹೋಗುವುದು ಗ್ಯಾರಂಟಿ ಎಂದು ಹೇಳಿದ್ದಾರೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ರಾಜ್ಯದಲ್ಲಿ ಬಹಳಷ್ಟು ಭ್ರಷ್ಟಾಚಾರ ನಡೆದಿದೆ. . ಭ್ರಷ್ಟರು ಸಂಸತ್ ಗೆ ಹೋದರೆ ಭ್ರಷ್ಟಾಚರ ಮತ್ತಷ್ಟು ಹೆಚ್ಚುತ್ತದೆ. ಸುಧಾಕರ್ ವಿರುದ್ಧ ತನಿಖೆಗೆ ಈಗಾಗಲೇ ಆಯೋಗ ರಚನೆ ಮಾಡಿದ್ದೇವೆ ಎಂದರು.

ಮಾಹಿತಿ ಪ್ರಕಾರ ಎಲ್ಲಾ ದಾಖಲೆಗಳು ಸುಧಾಕರ್ ಅವರ ವಿರುದ್ಧವೇ ಇದೆ. ಹಾಗಾಗಿ ಸುಧಾಕರ್ ನೂರಕ್ಕೆ ನೂರರಷ್ಟು ಜೈಲಿಗೆ ಹೋಗುತ್ತಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯಲ್ಲಿ ಮಂತ್ರಿಯಾಗಿದ್ದಾಗ ಹಣ ಲೂಟಿ ಮಾಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಜನ ಸೋಲಿಸಿದ್ದೀರಿ. ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಲಾಭಿ ನಡೆಸಿ ಟಿಕೆಟ್ ಪಡೆದಿದ್ದಾರೆ. ನಾವು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ಮಾತು ಕೊಟ್ಟಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಹಾಗಾಗಿ ಈಬಾರಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯನನ್ನು ಗೆಲ್ಲಿಸುವಂತೆ ಕರೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular