HomeKarnatakaBREAKING NEWS: ಸಿಎಂ ವಿರುದ್ಧ ಇಡಿ FIR ದಾಖಲು ಹಿನ್ನೆಲೆ: ಸಿದ್ದರಾಮಯ್ಯ ಆಪ್ತರ ಮೇಲೂ ದಾಳಿ...

BREAKING NEWS: ಸಿಎಂ ವಿರುದ್ಧ ಇಡಿ FIR ದಾಖಲು ಹಿನ್ನೆಲೆ: ಸಿದ್ದರಾಮಯ್ಯ ಆಪ್ತರ ಮೇಲೂ ದಾಳಿ ಸಾಧ್ಯತೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕೂಡ ಎಫ್ಐಆರ್ ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರಿಗೂ ಇದೀಗ ಇಡಿ ದಾಳಿ ಭೀತಿ ಶುರುವಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಆಪ್ತರ ಮನೆ, ಕಚೇರಿ ಮೇಲೂ ಶೀಘ್ರದಲ್ಲೇ ಇಡಿ ದಾಳಿ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಇಡಿ ಅಧಿಕಾರಿಗಳು ತೆರೆಮರೆಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಎಂ ಆಪ್ತರ ಫೋನ್ ಕಾಲ್, ಬ್ಯಾಂಕ್ ಖಾತೆ ಸೇರಿದಂತೆ ಹಲವು ಮಹತ್ವದ ಮಾಹಿತಿಗಳನ್ನು ಇಡಿ ಅಧಿಕಾರಿಗಳು ಕಲೆಹಾಕುತ್ತಿದ್ದಾರೆ. ಜಾರ್ಖಂಡ್ ಮಾದರಿಯಲ್ಲಿ ದಾಳಿ ನಡೆಸುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular