ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆ ವಾಹನಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮುಂದೆ ಹೋಗುತ್ತಿದ್ದ ಬೆಂಗಾವಲು ಪಡೆ ಜೀಪ್ ಗೆ ಹಿಂದೆ ಇದ್ದ ಜೀಪ್ ಡಿಕ್ಕಿ ಹೊಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ಇಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಬೆಂಗಾವಲು ಪಡೆ ವಾಹನಗಳ ನಡುವಿನ ಅಪಘಾತದಲ್ಲಿ ಅದೃಷ್ಣವಶಾತ್ ಯಾವುದೇ ರೀತಿ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
