HomeKarnatakaBREAKING : ಪ್ರತಿಭಟನೆ ವೇಳೆ 'ಸಿಎಂ ಸಿದ್ದರಾಮಯ್ಯ' ಅಭಿಮಾನಿಗೆ ತಗುಲಿದ ಬೆಂಕಿ, ಗಂಭೀರ ಗಾಯ.!

BREAKING : ಪ್ರತಿಭಟನೆ ವೇಳೆ ‘ಸಿಎಂ ಸಿದ್ದರಾಮಯ್ಯ’ ಅಭಿಮಾನಿಗೆ ತಗುಲಿದ ಬೆಂಕಿ, ಗಂಭೀರ ಗಾಯ.!

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿಯೂ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಅಭಿಮನಿಗಳ ಸಂಘದಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

ಪ್ರತಿಭಟನೆಯ ವೇಳೆ ಅವಘಡವೊಂದು ಸಂಭವಿಸಿದೆ. ಬಾಗಲಕೋಟೆಯ ಡಿಸಿ ಸರ್ಕಲ್ ಬಳಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ಸಂಘದಿಂದ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಸಿದ್ದರಾಮಯ್ಯ ಅಭಿಮಾನಿಯೊಬ್ಬರಿಗೆ ಬೆಂಕಿ ತಗುಲಿದೆ.

ಪ್ರತಿಭಟನೆ ವೇಳೆ ರಾಜ್ಯಪಾಲ ಗೆಹ್ಲೋಟ್ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ದಹಿಸುವ ವೇಳೆ ಏಕಾಏಕಿ ಬೆಂಕಿ, ಸಿದ್ದರಾಮಯ್ಯನವರ ಅಭಿಮಾನಿಗೆ ತಗುಲಿದೆ. ಅಭಿಮಾನಿಯ ಎದೆ, ಮುಖ, ಭುಜಕ್ಕೆ ಬೆಂಕಿ ತಗುಲಿ ಗಾಯಗೊಂಡಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular