HomeKarnatakaಗ್ಯಾರಂಟಿ ಯೋಜನೆಗಳೊಂದಿಗೆ ಎಲ್ಲ ಅಭಿವೃದ್ಧಿ ಕಾರ್ಯ ಮುಂದುವರಿಕೆ; ಆರ್ಥಿಕತೆ ಸದೃಢ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳೊಂದಿಗೆ ಎಲ್ಲ ಅಭಿವೃದ್ಧಿ ಕಾರ್ಯ ಮುಂದುವರಿಕೆ; ಆರ್ಥಿಕತೆ ಸದೃಢ: ಸಿಎಂ ಸಿದ್ದರಾಮಯ್ಯ

ಧಾರವಾಡ: ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಸರ್ಕಾರದ ವಿರುದ್ಧ ಸುಳ್ಳ ಆರೋಪ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗಿದೆ.  ಪಂಚ ಗ್ಯಾರಂಟಿಗಳು ಸೇರಿ ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವರ್ಷ ಸುಮಾರು 3 ಲಕ್ಷ 80 ಸಾವಿರ ಕೋಟಿ ರೂ. ಗಳ ಬಜೆಟ್ ಮಂಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಮಧ್ಯಾಹ್ನ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ, ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಂಚಗ್ಯಾರಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿಗೆ ಹಣದ ಕೊರತೆ ಆಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ತೊಂದರೆ ಇಲ್ಲ. ಸರ್ಕಾರದ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರೆಯಲಿವೆ. ಪ್ರಸಕ್ತ ವರ್ಷ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಸುಮಾರು 32 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಮುಂದಿನ ವರ್ಷದಿಂದ ಪ್ರತಿವರ್ಷ ಪಂಚ ಗ್ಯಾರಂಟಿಗಳ ಜಾರಿಗೆ ಸುಮಾರು 56 ಸಾವಿರ ಕೋಟಿ ರೂ.ಗಳು ಬೇಕಾಗುತ್ತದೆ. ಈ ಎಲ್ಲ ಅಗತ್ಯ ಹಣ ಹೊಂದಿಸಲು ಸರ್ಕಾರ ಸಶಕ್ತವಾಗಿದೆ. ಯಾರಿಗೂ ಭಯಬೇಡ ಎಂದು ತಿಳಿಸಿದರು.

ಇಂದು ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದಾರೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವುದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ. ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದರು.

ಯುವಕರು, ಹೆಚ್ಚುಜನ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಕೃಷಿ ವಿವಿಗಳು ಕಾರ್ಯ ಮಾಡಬೇಕು. ವಿಶ್ವವಿದ್ಯಾಲಯದ ಸಂಶೋಧನೆ, ತಾಂತ್ರಿಕತೆಗಳು ರೈತರ ಜಮೀನುಗಳಿಗೆ ತಲುಪಿದರೆ ಮಾತ್ರ ಸಾರ್ಥಕವಾಗುತ್ತದೆ.  ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯುವಂತೆ ಆಕರ್ಷಕವಾಗಿ ಸಂಘಟಿಸಬೇಕು ಎಂದರು.

ಕೃಷಿ ಸಚಿವ ಎನ್. ಚಲುರಾಯಸ್ವಾಮಿ ಅವರು ಮಾತನಾಡಿ, ಕೃಷಿಭಾಗ್ಯ ಯೋಜನೆ ಮುಂದುವರಿಕೆ ಸರ್ಕಾರ ಆದೇಶಿಸಿದೆ. ಧಾರವಾಡ ಕೃಷಿ ವಿವಿಯು, ರಾಷ್ಟ್ರದ 10 ಉತ್ತಮ ಕೃಷಿ ವಿಶ್ವವಿದ್ಯಾಲಯದಗಳಲ್ಲಿ ಸ್ಥಾನಪಡೆದಿದೆ ಎಂದರು.

ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಮಾತನಾಡಿ,  ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ರೈತರಿಗೆ ಅನಕೂಲ ಮಾಡಿದೆ. ಪ್ರಸ್ತುತ ರಾಜ್ಯ ಸರ್ಕಾರ ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ ಮತ್ತು 10 ರಿಂದ 15 ಲಕ್ಷ ರೂ. ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು 25 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ರೈತರ, ಬಡವರ ಶ್ರೇಯೋಭಿವೃದ್ದಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular