ಭ್ರಷ್ಟಾಚಾರದಲ್ಲಿಯೂ A1; ಈಗ ಎಫ್ಐಆರ್ ನಲ್ಲಿಯೂ A1: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವ್ಯಂಗ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಸಿಎಂ ವಿರುದ್ಧ ವ್ಯಂಗ್ಯವಾಡಿದೆ.

ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ A1
ಭಂಡತನದಲ್ಲಿ A1
ಮೋಸ ಮಾಡುವುದರಲ್ಲಿ A1
ಸುಳ್ಳು ಹೇಳುವುದರಲ್ಲಿ A1
ಈಗ ಎಫ್‌ಐಆರ್‌ನಲ್ಲಿಯೂ ಸಹ A1 ಎಂದು ಲೇವಡಿ ಮಾಡಿದೆ.

ಮೂಡಾ ಹಗರಣದ ರೂವಾರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ತಿಳಿಸಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಲೋಕಾಯುಕ್ತದಲ್ಲಿ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಎಫ್ಐಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದು, ಸಿಎಂ ಪತ್ನಿ ಪಾರ್ವತಿ ಎ2, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಎ3, ಭೂಮಾಲೀಕ ದೇವರಾಜು ಎ4 ಹಾಗೂ ಇತರರು ಎ5 ಎಂದು ಉಲ್ಲೇಖಿಸಲಾಗಿದೆ.

ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read