BIG NEWS : ಯಾವ ಕ್ಷಣದಲ್ಲಾದರೂ ‘ಸಿದ್ದರಾಮಯ್ಯ ಸರ್ಕಾರ’ ಬೀಳಬಹುದು : B.Y ವಿಜಯೇಂದ್ರ ಸ್ಪೋಟಕ ಹೇಳಿಕೆ.!

ಬೆಂಗಳೂರು : ಯಾವ ಕ್ಷಣದಲ್ಲಾದರೂ ಸಿದ್ದರಾಮಯ್ಯ ಸರ್ಕಾರ ಬೀಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ ”ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮುಡಾ ಹಗರಣದ ಎ-1 ಆರೋಪಿ. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಲ್ಲಿ ಕೆಳಗಿಳಿಸಲು ಕಾಂಗ್ರೆಸ್ ನಾಯಕರೇ ಹುನ್ನಾರ ನಡೆಸಿದ್ದಾರೆ. ಯಾವ ಕ್ಷಣದಲ್ಲಾದರೂ ಸಿದ್ದರಾಮಯ್ಯ ಸರ್ಕಾರ ಬೀಳಬಹುದು” ಎಂದು ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

ಡಿ.ಕೆ ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಪದೇ ಪದೇ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದು, ಸಿದ್ದರಾಮಯ್ಯರನ್ನು ಕೆಳಗಿಳಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪ ಮಾಡಿದರು.

ಕಾಂಗ್ರೆಸ್ ದಲಿತರಿಗೆ ಏನೂ ಮಾಡಿಲ್ಲ

ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು ಅಧಿಕಾರ ನಡೆಸಿದ ಕಾಂಗ್ರೆಸ್ ದಲಿತರಿಗೆ ಏನೂ ಮಾಡಿಲ್ಲ. ಆದರೆ ಮೋದಿ ಸರ್ಕಾರ ಅಂಬೇಡ್ಕರ್ ಅವರ ಬಗ್ಗೆ ನೈಜ ಕಾಳಜಿ ತೋರಿದೆ, ಬಾಬಾ ಸಾಹೇಬರ ಹುಟ್ಟೂರಿಗೆ ಮೊದಲ ಬಾರಿಗೆ ಭೇಟಿ ನೀಡಿದ ಏಕೈಕ ಪ್ರಧಾನಿ ಎಂದರೆ ಅದು ನಮ್ಮ ಮೋದಿ ಅವರು ಎಂದು ವಿಜಯೇಂದ್ರ ಹೇಳಿದ್ದಾರೆ.

https://twitter.com/BJP4Karnataka/status/1842875751311282436

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read