HomeKarnatakaBREAKING : 'CM ಸಿದ್ದರಾಮಯ್ಯ'ಗೆ ಮತ್ತೊಂದು ಸಂಕಷ್ಟ: ರಾಜ್ಯಪಾಲರಿಗೆ ಇನ್ನೊಂದು ದೂರು ಸಲ್ಲಿಸಿದ ಬಿಜೆಪಿ

BREAKING : ‘CM ಸಿದ್ದರಾಮಯ್ಯ’ಗೆ ಮತ್ತೊಂದು ಸಂಕಷ್ಟ: ರಾಜ್ಯಪಾಲರಿಗೆ ಇನ್ನೊಂದು ದೂರು ಸಲ್ಲಿಸಿದ ಬಿಜೆಪಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ ಎನ್ನುವಾಗಲೇ ಬಿಜೆಪಿ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಿದೆ.

ಮುಡಾಗೆ ಸಂಬಂಧಿಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸಿಎಂ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ಮುಡಾ ಆಸ್ತಿಯ ಅಕ್ರಮ ಡಿನೋಟಿಫಿಕೇಷನ್ ಕುರಿತು ಸಿದ್ದರಾಮಯ್ಯ ಹಾಗೂ ಬಸವೇಗೌಡ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕೋರಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಣಕಲ್ ಗ್ರಾಮದ ಸರ್ವೆ ನಂ.70/4ಎ ಜಾಗವನ್ನು ಮುಡಾ ಸ್ವಾಧೀನಪಡಿಸಿಕೊಂಡಿತ್ತು. ಈ ಭೂಮಿಯನ್ನು ಡಿನೋಇಫಿಕೇಷನ್ ಮಾಡುವಲ್ಲಿ ಸಿಎಂ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಎನ್.ಆರ್.ರಮೇಶ್ ದೂರು ನೀಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular