HomeLatest NewsBIG NEWS: ಕುಮಾರಸ್ವಾಮಿ ಕೇಂದ್ರದಿಂದ ಪ್ರವಾಹ ಪರಿಹಾರ ಕೊಡಿಸಲಿ: ಟಾಂಗ್ ನೀಡಿದ ಸಿಎಂ

BIG NEWS: ಕುಮಾರಸ್ವಾಮಿ ಕೇಂದ್ರದಿಂದ ಪ್ರವಾಹ ಪರಿಹಾರ ಕೊಡಿಸಲಿ: ಟಾಂಗ್ ನೀಡಿದ ಸಿಎಂ

ಬೆಂಗಳೂರು: ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ,ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಪರಿಹಾರ ತೆಗೆದುಕೊಳ್ಳುವಂತಾಯಿತು. ಕೇಂದ್ರದಿಂದ ಕುಮಾರಸ್ವಾಮಿ ಪರಿಹಾರ ಕೊಡಿಸಲಿ. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯಸರ್ಕಾರ ಸಲ್ಲಿಸುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular