BIG NEWS: ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಹಾಸನದಲ್ಲಿ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಹಾಗೂ ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತೀವ್ರ ನಿಗಾ ವಹಿಸಿದ್ದಾರೆ.

ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ ಎಂದು ಎಂದು ಸಿಎಂ ತಿಳಿಸಿದ್ದಾರೆ.

ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜೊತೆಗೂ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read