HomeKarnatakaಐಎಎಸ್ ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಂಡ ಸರ್ಕಾರ: ಪ್ರಶ್ನಿಸಿದ್ದಕ್ಕೆ ಬಿಜೆಪಿ, ಜೆಡಿಎಸ್ ಮೇಲೆ ದಬ್ಬಾಳಿಕೆ: ಹೆಚ್.ಡಿ.ಕೆ. ಆರೋಪ

ಐಎಎಸ್ ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಂಡ ಸರ್ಕಾರ: ಪ್ರಶ್ನಿಸಿದ್ದಕ್ಕೆ ಬಿಜೆಪಿ, ಜೆಡಿಎಸ್ ಮೇಲೆ ದಬ್ಬಾಳಿಕೆ: ಹೆಚ್.ಡಿ.ಕೆ. ಆರೋಪ

ಬೆಂಗಳೂರು: ಐಎಎಸ್ ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕರನ್ನು ಸ್ವಾಗತಿಸಲು ಹಿರಿಯ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ. ಇದನ್ನು ಪ್ರಶ್ನಿಸಿದ ಬಿಜೆಪಿ, ಜೆಡಿಎಸ್ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸಿದೆ. ನಮ್ಮದು ತಪ್ಪಾಗಿದೆ. ಇನ್ನು ಮುಂದೆ ಮಾಡುವುದಿಲ್ಲ ಎಂದಿದ್ದರೆ ಆಗುತ್ತಿತ್ತು. ಆದರೆ, ಆಡಳಿತಾರೂಢ ಕಾಂಗ್ರೆಸ್ ನವರಿಗೆ ಇದು ಪ್ರತಿಷ್ಠೆಯಾಗಿದೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನಾನು ಬೇರೆ ರಾಜ್ಯಗಳ ಮುಖ್ಯಮಂತ್ರಿಗಳ ಸ್ವಾಗತಕ್ಕೆ ಅಧಿಕಾರಿಗಳನ್ನು ನೇಮಿಸಿರಲಿಲ್ಲ. ಜೆಡಿಎಸ್ ನಾಯಕರಾಗಿದ್ದ ಡ್ಯಾನಿಶ್ ಅಲಿ ಸ್ವಾಗತಕ್ಕೆ ಅಧಿಕಾರಿಗಳನ್ನು ನೇಮಿಸಿರಲಿಲ್ಲ. ಅಧಿಕಾರಿ ಓ.ಎಸ್. ಪಾಟೀಲ್ ಅವರನ್ನು ನಾನು ನೇಮಕ ಮಾಡಿರಲಿಲ್ಲ. ಆದರೆ, ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ತಮಗೆ ವಿಶೇಷ ಕ್ಯಾಬಿನ್, ಅಧಿಕಾರಿ ಬೇಕು ಎಂದು ಹೇಳಿದ್ದರು. ಸರ್ಕಾರದಲ್ಲಿ ಯಾವುದೇ ಸ್ಥಾನಮಾನ ಇಲ್ಲದಿದ್ದರೂ ಸವಲತ್ತು ಪಡೆದಿದ್ದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular