ಶಿಗ್ಗಾವಿಯಲ್ಲಿ ಭರ್ಜರಿ ಜಯಗಳಿಸಿದ 2 ದಿನದಲ್ಲೇ ಖಾದ್ರಿಗೆ ಬಂಪರ್ ಗಿಫ್ಟ್

ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾದ ಎರಡು ದಿನದಲ್ಲೇ ಕಾಂಗ್ರೆಸ್ ಮುಖಂಡ ಅಜ್ಜಂಪೀರ್ ಖಾದ್ರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಕೊಡುಗೆ ನೀಡಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಜ್ಜಂಪೀರ್ ಖಾದ್ರಿ ಸಿಎಂ ಸಿದ್ದರಾಮಯ್ಯ ಮನವಿ ಮೇರೆಗೆ ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದರು. ಫಲಿತಾಂಶ ಪ್ರಕಟವಾದ ಎರಡು ದಿನದಲ್ಲಿಯೇ ಅಜ್ಜಂಪೀರ್ ಖಾದ್ರಿಯವರಿಗೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ತಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ವಾಪಸ್ ಪಡೆದುಕೊಂಡಿದ್ದಕ್ಕೆ ಖಾದ್ರಿಯವರಿಗೆ ಸಿಎಂ ಗಿಫ್ಟ್ ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಖಾದ್ರಿ ಸಾಕಷ್ಟು ಪ್ರಯತ್ನ ನಡೆಸಿದ್ದರು. ಕೊನೆ ಕ್ಷಣದಲ್ಲಿ ಯಾಸಿರ್ ಖಾನ್ ಪಠಾಣ್ ಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಆಕ್ರೋಶಗೊಂಡಿದ್ದ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ನಾಯಕರು ಮನವೊಲಿಸಲು ಪ್ರಯತ್ನಿಸಿದರೂ ಖಾದ್ರಿ ಒಪ್ಪಿರಲಿಲ್ಲ. ಕೊನೆಗೆ ಸಿಎಂ ಸಿದ್ದರಾಮಯ್ಯ ಮನವೊಲಿಸಿ ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದರು. ಅಂತೆಯೇ ಅವರ ಮಾತಿಗೆ ಬೆಲೆಕೊಟ್ಟು ಖಾದ್ರಿ ನಾಮಪತ್ರ ವಾಪಸ್ ಪಡೆದುಕೊಂಡು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read