ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿಸಿಸಿ ಕಾನೂನು, ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ಕವಿತಾ ಕಾಳೆ ಅವರು ದೂರು ನೀಡಿದ್ದಾರೆ. ಅವರ ದೂರನ್ನು ಆಧರಿಸಿ ದೇವರಾಜ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಹೆಚ್. ವಿಶ್ವನಾಥ್ ಅವರು ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಹೇಡಿ ಸೇರಿದಂತೆ ಅವಹೇಳನಕಾರಿ ಪದಗಳಿಂದ ನಿಂದಿಸಿ ಮಾನಹಾನಿ ಉಂಟು ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.