HomeLatest NewsBIG NEWS: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ:...

BIG NEWS: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾಅರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ರೀತಿ ಮಾಡಿದ್ದು ಸರಿಯಲ್ಲ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ನಿಯಮಬಾಹಿರ. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು. ಹೀಗೆ ಅನವಶ್ಯಕವಾಗಿ ಧಾರ್ಮಿಕ ನಂಬಿಕೆಗಳ ವಿರುದ್ಧವಾದ ನಿಯಮ ಹೇರಿಕೆ ಮಾಡಬಾರದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ತಪ್ಪು ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular