HomeKarnatakaಕನ್ನಡಿಗರ ಹಿತ ಕಾಯುವಲ್ಲಿ ಸಿಎಂ ವಿಫಲ: ಕೂಡಲೇ ರಾಜೀನಾಮೆ ನೀಡಲಿ: ಸಿದ್ಧರಾಮಯ್ಯ

ಕನ್ನಡಿಗರ ಹಿತ ಕಾಯುವಲ್ಲಿ ಸಿಎಂ ವಿಫಲ: ಕೂಡಲೇ ರಾಜೀನಾಮೆ ನೀಡಲಿ: ಸಿದ್ಧರಾಮಯ್ಯ

ನವದೆಹಲಿ: ಮಹಾರಾಷ್ಟ್ರದ ಹಸ್ತಕ್ಷೇಪವನ್ನು ನಾವು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೇರೆ ರಾಜ್ಯದ ಆಡಳಿತದಲ್ಲಿ ನಾವು ಮೂಗು ತೂರಿಸುವುದಿಲ್ಲ ಕರ್ನಾಟಕದ ಜನರು ಸೌಮ್ಯ ಸ್ವಭಾವದವರು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, 800 ಹಳ್ಳಿಗಳಲ್ಲಿ ಆರೋಗ್ಯ ಯೋಜನೆ ಜಾರಿಗೆ ಮಹಾರಾಷ್ಟ್ರದವರು ಮುಂದಾಗಿದ್ದಾರೆ. ಕರ್ನಾಟಕದ 800 ಹಳ್ಳಿಗಳಲ್ಲಿ ಆರೋಗ್ಯ ಯೋಜನೆ ಜಾರಿಗೆ ಮಹಾರಾಷ್ಟ್ರ ಸರ್ಕಾರ ಕ್ರಮ ಕೈಗೊಂಡಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಮ್ಮನೆ ಇದ್ದಾರೆ. ಕನ್ನಡಿಗರ ಹಿತ ಕಾಪಾಡುವಲ್ಲಿ ಸಿಎಂ ಸಂಪೂರ್ಣ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಬೊಮ್ಮಾಯಿ ಲಾಯಕ್ಕಿಲ್ಲ. ಕೂಡಲೇ ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular