HomeLatest Newsನೀರಿನ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ರೈತರಿಗೆ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ನೀರಿನ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ರೈತರಿಗೆ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಮೈಸೂರು: ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಮಾಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೃಷಿ-ತೋಟಗಾರಿಕೆ-ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ಹಂಚಿಕೊಂಡಿಲ್ಲದ್ದಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯ, ಜಂಟಿ ಸಭೆಗಳನ್ನು ನಡೆಸಲು ಸೂಚಿಸಿದರು

ಒಟ್ಟು ನೀರಾವರಿ ಭೂಮಿಯಲ್ಲಿ ವಾಡಿಕೆಗಿಂತ 3000 ಹೆಕ್ಟೇರ್‌ ಭೂಮಿಯಲ್ಲಿ ಕಡಿಮೆ ಬಿತ್ತನೆ ಆಗಿರುವುದಕ್ಕೆ ಏನು ಕಾರಣ, ಮಳೆ ಹೇರಳವಾಗಿ ಬಿದ್ದಿದೆ. ನೀರಿನ ಕೊರತೆಯೂ ಇಲ್ಲ. ಹೀಗಿದ್ದೂ ಬಿತ್ತನೆ ಏರಿಯಾ ಕಡಿಮೆ ಆಗಿರುವುದಕ್ಕೆ ಏನು ಕಾರಣ ಎಂದು ಕೃಷಿ ಇಲಾಖೆಯ ಜಂಟಿ ನರ‍್ದೇಶಕರಿಗೆ ಸಿಎಂ ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುರುಳಿ, ಮುಸುಕಿನ ಜೋಳ ಬಿತ್ತನೆ ಇನ್ನೂ ಆಗಬೇಕಿದೆ. ಕೆಲವು ರೈತರು ಬೆಳೆಯನ್ನು ಬದಲಾಯಿಸಿದ್ದಾರೆ. ಗೊಬ್ಬರ, ಬೀಜ ನಮ್ಮಲ್ಲಿ ಸಂಗ್ರಹ ಇದೆ. ರೈತರಿಗೆ ಅಗತ್ಯಕ್ಕಿಂತ ಹೆಚ್ಚು ಗೊಬ್ಬರವನ್ನೂ ದಾಸ್ತಾನು ಮಾಡಿಟ್ಟುಕೊಂಡಿದ್ದೇವೆ. ಯೂರಿಯಾ ಅಗತ್ಯ ಇರುವುದಕ್ಕಿಂತ ಹೆಚ್ಚು ಸಂಗ್ರಹವಿದೆ ಎಂದು ಜಂಟಿ ನಿರ್ದೇಶಕರು ಉತ್ತರಿಸಿದರು.

ಬೇರೆ ಬೇರೆ ತಾಲ್ಲೂಕಿನ ಕೃಷಿ ಭೂಮಿಗಳಿಗೆ ಭೇಟಿ ನೀಡಿದ್ದೀರಾ? ಭೇಟಿ ನೀಡಿದ ಬಗ್ಗೆ ಡೈರಿ ಬರೆದಿದ್ದೀರಾ? ನಿಮ್ಮ ಕೆಳ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಡೈರಿ ಬರೆದಿರುವುದನ್ನು, ಸ್ಥಳಕ್ಕೆ ಭೇಟಿ ನೀಡಿರುವುದನ್ನು ಪರಿಶೀಲಿಸಿದ್ದೀರಾ ಎಂದು ಕೇಳಿದ ಸಿಎಂ ಡೈರಿ ತೂರಿಸುವಂತೆ ಸೂಚಿಸಿದರು.

ಪ್ರವಾಹದಿಂದ ಆಗಿರುವ ಅನಾಹುತಗಳು ಮತ್ತು ಪರಿಹಾರ ಹಾಗೂ ರೈತರ ಆತ್ಮಹತ್ಯೆಗಳು ಹಾಗೂ ಪರಿಹಾರ ಸರ‍್ಪಕವಾಗಿ ಒದಗಿಸಿರುವ ಬಗ್ಗೆ ಸಿಎಂ ಮಾಹಿತಿ ಪಡೆದು ದಾಖಲೆ ಪರಿಶೀಲಿಸಿದರು.

ಯಾವ ಯಾವ ಬೆಳೆಗಳಿಗೆ ಯಾವ ಯಾವ ರೋಗ ಬಂದಿದೆ? ಇದಕ್ಕೆ ಕಾರಣಗಳನ್ನು ಮತ್ತು ಪರಿಣಾಮಗಳನ್ನು ರೈತರಿಂದ ಕೇಳಿ ದಾಖಲು ಮಾಡಿಕೊಂಡಿದ್ದೀರಾ? ಎಷ್ಟು ಹೆಕ್ಟೇರ್‌ ಬೆಳೆಗೆ ವಿಮೆ ಹಣ ಸಂದಾಯ ಆಗಿದೆ ಎನ್ನುವ ಬಗ್ಗೆ ಮಾಹಿತಿ ಪಡೆದು ದಾಖಲೆಗಳನ್ನು ಪರಿಶೀಲಿಸಿದರು.

ಮಹಾರಾಷ್ಟ್ರಕ್ಕೆ ಹೋಗಿ ಅಧ್ಯಯನ ನಡೆಸಿಕೊಂಡು ಬನ್ನಿ: ಸಿಎಂ ಸೂಚನೆ:
ಮಹಾರಾಷ್ಟ್ರದ ರೈತರು ವರ್ಷಕ್ಕೆ ಮೂರು ಬೆಳೆ ಬೆಳೆಯುತ್ತಾರೆ. ನಮ್ಮ ಜಿಲ್ಲೆಯಲ್ಲಿ ಎರಡು ಬೆಳೆ ಮಾತ್ರ ಸಾಧ್ಯವಾಗುತ್ತಿದೆ. ಒಮ್ಮೆ ಮಹಾರಾಷ್ಟ್ರಕ್ಕೆ ತೆರಳಿ ಅಧ್ಯಯನ ಮಾಡಿಕೊಂಡು, ನಮ್ಮ ಇಲ್ಲಿನ ವಾತಾವರಣ ಮತ್ತು ಪರಿಸ್ಥಿತಿಗೆ ಹೇಗೆ ಅಳವಡಿಸಲು ಸಾಧ್ಯ ಎನ್ನುವ ಬಗ್ಗೆ ವರದಿ ನೀಡಿ ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಬಾಳೆ ಬೆಳೆ ಹಿಂದಿನ ತಿಂಗಳುಗಳಲ್ಲಿ ಕಡಿಮೆ ಆಗಿತ್ತು. ಈಗ ಹೆಚ್ಚಾಗಿದೆ. ಶುಂಟಿ ಕೂಡ ಹೆಚ್ಚಾಗಿದೆ. ಅಡಿಕೆ ಬೆಳೆಯುವ ಪ್ರಮಾಣ ಕೂಡ ಹೆಚ್ಚಾಗಿದೆ. ಶುಂಟಿ ಮತ್ತು ಇತರೆ ಬೆಳೆಗಳಿಗೆ ರೋಗ ಬಾದಿಸಿತ್ತು. ವಿಜ್ಞಾನಿಗಳ ಜೊತೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆವು. ಬಿಸಿಲಿನ ಕೊರತೆಯಿಂದ ಕಡಿಮೆಯಾಗಿತ್ತು. ಬಿಸಿಲು ಬರುತ್ತಿದ್ದಂತೆ ಮತ್ತೆ ಇಳುವರಿ ಹೆಚ್ಚಾಗುವ ಬಗ್ಗೆ ವಿಜ್ಞಾನಿಗಳು ತಿಳಿಸಿದ್ದಾರೆ. ತೆಂಗು ಮತ್ತು ಅಡಿಕೆ ಬೆಳೆಗೆ ಕೆಲವು ಕಡೆ ರೋಗ ಬಂದಿದೆ. ಸ್ಥಳಕ್ಕೇ ಹೋಗಿ ರೋಗ ತಡೆಗಟ್ಟಲು ಮೊದಲ ಹಂತದಲ್ಲಿ ಕ್ರಮ ಕೈಗೊಂಡು ಬಳಿಕ ರೋಗ ನಿವಾರಣೆಗೆ ಔಷಧಗಳನ್ನು ಸಿಂಪಡಿಸಲಾಗಿದೆ. ಆದಾಯ ಹೆಚ್ಚು ಎನ್ನುವ ಕಾರಣಕ್ಕೆ ರೈತರು ತೋಟಗಾರಿಕಾ ಬೆಳೆಗಳಿಗೆ ಹೆಚ್ಚೆಚ್ಚು ಒಲವು ತೋರಿಸುತ್ತಿದ್ದಾರೆ ಎಂದು ತೋಟಗಾರಿಕಾ ಇಲಾಖೆಯ ಡೆಪ್ಯುಟಿ ಡೈರೆಕ್ಟರ್‌ ಸಭೆಗೆ ಮಾಹಿತಿ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular