HomeKarnatakaBREAKING NEWS: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ: ಬುಧವಾರ ಶಾಸಕಾಂಗ ಪಕ್ಷದ ಸಭೆ...

BREAKING NEWS: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ: ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ವರಿಷ್ಠರು, ಸಚಿವರ ಬಳಿಕ ಶಾಸಕರ ವಿಶ್ವಾಸ ಪಡೆಯುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಕ್ಷದ ಕಾರ್ಯಕರ್ತರೇ ಬಲ. ಹೀಗಾಗಿ ಶಾಸಕರ ಸಭೆ ಕರೆದು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ.

ಈ ವೇಳೆ ರಾಜ್ಯಪಾಲರ ವಿರುದ್ಧ ಶಾಸಕಾಂಗ ಸಭೆ ನಿರ್ನಯ ಕೈಗೊಳ್ಳುವ ಸಾಧ್ಯತೆ ಇದೆ. ಮುಂದಿನ ಹೋರಾಟಗಳಿಗೆ ಶಾಸಕರ ಸಹಕಾರವನ್ನು ಸಿಎಂ ಕೋರಲಿದ್ದಾರೆ. ಅಲ್ಲದೇ ಇಡೀ ಪ್ರಕರಣದ ಬೆಳವಣಿಗೆ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular