HomeLatest NewsBREAKING: ದೆಹಲಿಗೆ ಕರೆದರೆ ಹೋಗುತ್ತೇನೆ; ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ

BREAKING: ದೆಹಲಿಗೆ ಕರೆದರೆ ಹೋಗುತ್ತೇನೆ; ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿಗಾಗಿ ಕದನ ಜೋರಾಗಿದೆ. ಈ ನಡುವೆ ಮಹತ್ವದ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಸಿಎಂ, ಡಿಸಿಎಂ ಅವರನ್ನು ದೆಹಲಿಗೆ ಕರೆದು ಚರ್ಚಿಸುವುದಾಗಿ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಪಾಲಿಸುತ್ತೇನೆ. ಅವರು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.

ಹೈಕಮಾಂಡ್ ನನಗೆ ಕರೆ ಮಾಡಲಿ ನೋಡೋಣ. ದೆಹಲಿಗೆ ಕರೆದರೆ ಹೋಗುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular