BIG NEWS: ಆಸ್ಪತ್ರೆಗೆ ದಾಖಲಾದ ಎಐಸಿಸಿ ಅಧ್ಯಕ್ಷ ಖರ್ಗೆ: ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಉಸಿರಾಟ ತೊಂದರೆಯಿಂದ ಅಸ್ವಸ್ಥರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಚಿಕಿತ್ಸೆಯ ನಂತರ ಖರ್ಗೆ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read