ಮೈಸೂರು: ರಾಜ್ಯದಲ್ಲಿ ಮತ್ತೆ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಜನದಟ್ಟಣೆ ಪ್ರದೇಶಗಳಲ್ಲಿ ಸಾರ್ವಜನಿಕರು ಓಡಾಡುವಾಗ ಫೇಸ್ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದೆ. ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮುಂಜಾಗೃತಾ ಕ್ರಮಗಳನ್ನು ಅನುಸರಿಸಿದ್ದಾರೆ.
ಫೇಸ್ ಮಾಸ್ಕ್ ಧರಿಸಿ ಜನತಾ ದರ್ಶನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನರಿಂದ ಹಲವಾಲುಗಳನು ಸ್ವೀಕರಿಸಿದರು.
ಮೈಸೂರಿನ ತಮ್ಮ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಮಾಸ್ಕ್ ಧರಿಸಿ ಜನತಾ ದರ್ಶನ ಮಾಡಿದರು. ಈ ವೇಳೆ ಜನರಿಂದ ಖುದ್ದು ಸಮಸ್ಯೆಗಳನ್ನು ಕೇಳಿ ಆಲಿಸಿದ್ದು, ಸೂಕ್ತ ಪರಿಹಾರ ಒದಗಿಸುವ ಬಗ್ಗೆಯೂ ಭರವಸೆಗಳನ್ನು ನೀಡಿದರು.