ನವದೆಹಲಿ: ವಿಧಾನ ಪರಿಷತ್ ನಾಲ್ಕು ಸ್ಥಾನಗಳು ತೆರವಾಗಿರುವ ಹಿನ್ನೆಲೆಯಲ್ಲಿ ನಾಲ್ಕು ಸ್ಥಾನಗಳ ಭರ್ತಿ ವಿಚಾರ ಕಗ್ಗಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಚೆ ಅವರನ್ನು ಭೇಟಿಯಾದರು. ಖರ್ಗೆ ನಿವಾಸದಲ್ಲಿ ಭೇಟಿಯಾದ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ ನ ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿ ವಿಚಾರವಾಗಿ ಮಾತುಕತೆ ನಡೆಸಿದರು.
ಇದೇ ವೇಳೆ ಸಚಿವ ಸಂಪುಟ ಪುನಾರಾಚನೆ, ಸ್ಥಳೀಯ ಸಂಸ್ಥೆಗಳ ಚುನಾವಣೆ, ರಾಜ್ಯ ರಾಜಕೀಯ ಪ್ರಸ್ತುತ ವಿದ್ಯಮಾನಗಳ ಬಗ್ಗೆಯೂ ಸಮಾಲೋಚನೆ ನಡೆಸಿದರು.