ದೇವದಾಸಿ ಪದ್ಧತಿ ಕಂಡುಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಹಲವು ಮಹತ್ವದ ಸೂಚನೆ ಹಾಗೂ ಎಚ್ಚರಿಕೆ ನೀಡಿದ್ದಾರೆ.

ವಿಧನಸೌಧದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇವದಾಸಿ ಪದ್ಧತಿ ನಿಷೇಧವಾಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಎಸ್ ಪಿ, ಡಿಸಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಸಿಎಂ ಸೂಚಿಸಿದರು.

ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ಎಂದು ಪ್ರಶ್ನಿಸಿದರು.

ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸಿಎಂ ಸೂಚಿಸಿದರು.

ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ರೀವೀವ್ ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read