HomeKarnatakaರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ: ಜನಸ್ನೇಹಿ ಆಡಳಿತಕ್ಕೆ ಪೊಲೀಸರಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ: ಜನಸ್ನೇಹಿ ಆಡಳಿತಕ್ಕೆ ಪೊಲೀಸರಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಜನಸ್ನೇಹಿ ಆಡಳಿತ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ, ದೂರು ನೀಡಲು ಬರುವವರ ಜೊತೆ ಸ್ನೇಹದಿಂದ ವರ್ತಿಸಬೇಕು. ಯಾವುದೇ ಕಾನೂನುಬಾಹಿರ ಚಟುವಟಿಕೆ ನಡೆದರೆ ಸಂಬಂಧಪಟ್ಟ ಡಿಸಿಪಿ, ಎಸ್‌ಪಿ ಹೊಣೆಗಾರರು ಎಂದು ಎಚ್ಚರಿಕೆ ನೀಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನೂನು ಕ್ರಮ ಕೈಗೊಳ್ಳುವಾಗ ಆ ಧರ್ಮ ಈ ಧರ್ಮ ಎನ್ನಬಾರದು, ಸರ್ವರನ್ನು ಸಮಾನವಾಗಿ ಕಾಣುವಂತೆ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದಕ್ಕಿಂತ ಮೊದಲು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಸಿಎಂ, ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.

ಜನ ಬದಲಾವಣೆಯ ನಿರೀಕ್ಷೆಯಲ್ಲಿ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು, ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಬೇಕು, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕಡಿದು ಹಾಕುವುದು, ತೇಜೋವಧೆ ಮಾಡುವುದು, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ತಾಕೀತು ಮಾಡಿದ್ದಾರೆ.

ಠಾಣೆಗಳಿಗೆ ಹಿರಿಯ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆಗಳ ಪರಿಹಾರಕ್ಕಾಗಿ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಪರಿಹರಿಸಿ ನ್ಯಾಯ ಒದಗಿಸಬೇಕು ಎಂದು ಸೂಚಿಸಿದ್ದಾರೆ.

ಪೊಲೀಸ್ ಠಾಣೆ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್ಸ್ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದ್ಯ ಕೆಲಸ ಮಾಡುವವರಿಗೆ ಶಹಬ್ಬಾಸ್ ಗಿರಿ ನೀಡುತ್ತೇವೆ, ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular